Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:33 - ಕನ್ನಡ ಸತ್ಯವೇದವು C.L. Bible (BSI)

33 ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೇಗೂ ನಾನು ಈಹೊತ್ತು ನಾಳೆ ನಾಡಿದು ಸಂಚಾರ ಮಾಡಬೇಕು; ಪ್ರವಾದಿಯಾದವನು ಯೆರೂಸಲೇವಿುನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅನಂತರ ನಾನು ಜೆರುಸಲೇಮಿಗೆ ಹೋಗಬೇಕು. ಏಕೆಂದರೆ ಪ್ರವಾದಿಗಳು ಅಲ್ಲೇ ಕೊಲ್ಲಲ್ಪಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತವ್ಡೆ ಪತರ್, ಮಾಜ್ಯಾ ವಾಟೆನ್ ಜಾವ್ನಗೆತ್ ರ್‍ಹಾತಾ.ಆಜ್ ಉದ್ದ್ಯಾ, ಅನಿ ಪರ್ವಾ, ಎಕ್ ಪ್ರವಾದ್ಯಾಕ್ ಜೆರುಜಲೆಮಾಚ್ಯಾ ಭಾಯ್ರ್ ಜಿವಾನಿ ಮಾರುಕ್ ಹೊಯ್ನಾ”. ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:33
10 ತಿಳಿವುಗಳ ಹೋಲಿಕೆ  

ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.


“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು.


ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು