Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:34 - ಕನ್ನಡ ಸತ್ಯವೇದವು C.L. Bible (BSI)

34 “ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:34
46 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ.


ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.


ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


“ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು