Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:35 - ಕನ್ನಡ ಸತ್ಯವೇದವು C.L. Bible (BSI)

35 ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿಬಿಟ್ಟದೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಿನ್ನ ಆಲಯವು ಬರಿದಾಗುವುದು. ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದ!’ ಎಂದು ಹೇಳುವ ಸಮಯದ ತನಕ ನೀನು ನನ್ನನ್ನು ನೋಡುವುದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅನಿ ತಿಯಾ ತುಜಿ ದೆವಾಚಿ ಗುಡಿ ಕಳ್ದುನ್ ಘೆತೆ. ಮಿಯಾ ತುಕಾ ಖರೆಚ್ ಸಾಂಗ್ತಾ, “ಸರ್ವೆಸ್ವರಾಚ್ಯಾ ನಾವಾನ್ ಯೆತಾ ತೆಕಾ ಜೈ ಹೊಂವ್ದಿ ಮನುನ್ ತಿಯಾ ಮಾಕಾ ಮನಿ ಪತರ್, ಮಿಯಾ ತುಕಾ ಬಗುಕ್ ಗಾವಿನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:35
31 ತಿಳಿವುಗಳ ಹೋಲಿಕೆ  

ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II


ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಅವರ ಪಾಳೆಯ ಹಾಳು ಬೀಳಲಿ I ಅವರ ಗುಡಾರ ಬಿಕೋ ಎನಿಸಲಿ II


ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು