Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:5 - ಕನ್ನಡ ಸತ್ಯವೇದವು C.L. Bible (BSI)

5 ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 'ನಾ, ಮಿಯಾ ತುಮ್ಕಾ ಸಾಂಗ್ತಾ, ತುಮಿ ತುಮ್ಚೆ ಪಾಪಾಚೆ ಜಿವನ್ ಬದ್ಲಿನಸ್ಲ್ಯಾರ್, ತುಮಿಬಿ ತಸೆಚ್ ಮರ್‍ತ್ಯಾಶಿ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:5
5 ತಿಳಿವುಗಳ ಹೋಲಿಕೆ  

ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?


ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು