Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:11 - ಕನ್ನಡ ಸತ್ಯವೇದವು C.L. Bible (BSI)

11 ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತಾ, ತೊ ವರ್‍ತಿ ಹೊತಾ, ಅನಿ ಜೊ ಕೊನ್ ಅಪ್ನಾಕುಚ್ ವರ್‍ತಿ ಕರ್‍ತಾ ತೊ ಖಾಲ್ತಿ ಹೊತಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:11
24 ತಿಳಿವುಗಳ ಹೋಲಿಕೆ  

“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ದೀನದಲಿತರನು ಉದ್ಧರಿಸುವವನು ನೀನು I ತಗ್ಗಿಸಿಬಿಡುವೆಯಲ್ಲವೆ ಪ್ರಭು, ಸೊಕ್ಕಿನ ಲೋಚಕರನು? II


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.


ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.


“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.


ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.


ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II


ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿತೀರಿಸಿ ಬಿಡಬಹುದು.


ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ.


ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು