Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:12 - ಕನ್ನಡ ಸತ್ಯವೇದವು C.L. Bible (BSI)

12 ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿತೀರಿಸಿ ಬಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಜೆಜುನ್ ಅಪ್ನಾಕ್ ಜೆವ್ನಾಕ್ ಬಲ್ವಲ್ಲ್ಯಾಕ್ “ಕನ್ನಾಬಿ ಜೆವ್ನಾಕ್ ಬಲ್ವುತಾನಾ ತಿಯಾ ತುಜ್ಯಾ ದೊಸ್ತಾಕ್ನಿ, ನಾಹೊಲ್ಯಾರ್ ಭಾವಾಕ್ನಿ, ನಾಹೊಲ್ಯಾರ್ ಸೊಯ್ರ್ಯಾಕ್ನಿ, ನಾಹೊಲ್ಯಾರ್, ತುಜ್ಯಾ ಸಾವ್ಕಾರ್ ಸೆಜಾರ್‍ಯಾಕ್ನಿ ಬಲ್ವುನಕೊ, ಕಶ್ಯಾಕ್ ಮಟ್ಲ್ಯಾರ್, ತೆನಿಬಿ ತುಕಾ ಜೆವ್ನಾಕ್ ಬಲ್ವುತ್ಯಾತ್. ಅನಿ ತಿಯಾ ತೆಂಕಾ ಕಾಯ್ ಕರ್‍ಲೆ, ತೆ ಸಗ್ಳೆ ತೆನಿ ತುಕಾಬಿ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:12
13 ತಿಳಿವುಗಳ ಹೋಲಿಕೆ  

ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ;


ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ: ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವೂ ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು