Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:18 - ಕನ್ನಡ ಸತ್ಯವೇದವು C.L. Bible (BSI)

18 ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಅವರೆಲ್ಲರೂ ಕ್ಷವಿುಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ - ಹೊಲವನ್ನು ಕ್ರಯಕ್ಕೆ ತಕ್ಕೊಂಡಿದ್ದೇನೆ, ಅದನ್ನು ಹೋಗಿ ನೋಡುವದಕ್ಕೆ ನನಗೆ ಅಗತ್ಯವಿದೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ, ತೆ, ಸೊಯ್ರೆ, ಎಕ್ಲ್ಯಾಚ್ಯಾ ಫಾಟ್ನಾ ಎಕ್ಲೊ, ಎಕ್ಯೆಕ್ ನೆವಾನ್ ದಿವ್ಕ್‌ ಲಾಗ್ಲೆ, ಪಯ್ಲೆಚ್ಯಾನ್ ತ್ಯಾ ಆಳಾಕ್ “ಮಿಯಾ ಎಕ್ ನ್ಹವೆ ಶೆತ್ ಖರಿದಿ ಕರ್‍ಲಾ, ಮಿಯಾ ಜಾವ್ನ್ ಉಲ್ಲೆ ತೆ ಬಗುಕ್ ಪಾಜೆ ದಯಾ ಕರುನ್ ಮಾಕಾ ಮಾಪ್ ಕರ್”, ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:18
24 ತಿಳಿವುಗಳ ಹೋಲಿಕೆ  

ಅವನು ವ್ಯಥೆಗೀಡಾದುದನ್ನು ಕಂಡ ಯೇಸು, “ಸಿರಿವಂತರಿಗೆ ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟೊಂದು ಕಷ್ಟ!


ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ.


ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ.


ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು