Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:24 - ಕನ್ನಡ ಸತ್ಯವೇದವು C.L. Bible (BSI)

24 ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಿಯಾ ತುಕಾ ಸಾಂಗ್ತಾ, ಮಿಯಾ ಅದ್ದಿ ಬಲ್ವಲ್ಲ್ಯಾನಿತ್ಲ್ಯಾ ಎಕ್ಲ್ಯಾನ್‍ಬಿ ಮಾಜ್ಯಾ ಜೆವ್ನಾಚಿ ರುಚಿ ಬಗುಕ್ ಗಾವುಚೆ ನ್ಹಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:24
12 ತಿಳಿವುಗಳ ಹೋಲಿಕೆ  

ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.


ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು