Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:30 - ಕನ್ನಡ ಸತ್ಯವೇದವು C.L. Bible (BSI)

30 ‘ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಈ ಮನುಷ್ಯನು ಕಟ್ಟಿಸುವದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆಹೋದನು ಎಂದು ಅವನನ್ನು ಹಾಸ್ಯಮಾಡಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ‘ಇವನು ಈ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಆದರೆ ಪೂರೈಸಲು ಅವನಿಂದಾಗಲಿಲ್ಲ’ ಎಂದು ಗೇಲಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅನಿ “ಹ್ಯಾ ಮಾನ್ಸಾನ್ ಘರ್ ಭಾಂದುಕ್ ಚಾಲು ಕರ್‍ಲ್ಯಾನ್, ಖರೆ, ಸಾರುಕ್ ತೆಕಾ ಹೊಯ್ನಾ ಹೊಲಾ” ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:30
11 ತಿಳಿವುಗಳ ಹೋಲಿಕೆ  

ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು,


ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು