Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:13 - ಕನ್ನಡ ಸತ್ಯವೇದವು C.L. Bible (BSI)

13 ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಉಲ್ಲಿ ದಿಸಾ ಗೆಲ್ಲ್ಯಾ ಮಾನಾ, ಧಾಕ್ಲ್ಯಾ ಲೆಕಾನ್, ಅಪ್ನಾಚ್ಯಾ ವಾಟ್ಯಾಚಿ ಆಸ್ತಿ ಇಕ್ಲ್ಯಾನ್ ಅನಿ ಪೈಸೆ ಘೆವ್ನ್ ತೊ ಘರ್ ಸೊಡುನ್ ಎಕ್ ಧುರ್‍ಲ್ಯಾ ದೆಸಾಕ್ ಗೆಲೊ ಅನಿ ಫಿಡ್ಲೊ ಇಚಾರ್ ಕರಿನಸ್ತಾನಾ ಸಗ್ಳೆ ಪೈಸೆ ಮಜ್ಯಾ ಮಾರುನ್ ಖರಚ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:13
35 ತಿಳಿವುಗಳ ಹೋಲಿಕೆ  

“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.


ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು.


ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.


ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.


ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.


ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.


ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.


ಅವರಲ್ಲಿ ಕಿರಿಯವನು, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು,’ ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟ.


ಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ ಆ ದೇಶದಾದ್ಯಂತ ಘೋರವಾದ ಕ್ಷಾಮ ತಲೆದೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು