Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:20 - ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎದ್ದು ತನ್ನ ತಂದೆಯ ಬಳಿಗೆ ಹೋದನು. “ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ, ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು, ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆ ಮನುನ್ ತೊ ಉಟ್ಲೊ ಅನಿ ಅಪ್ನಾಚ್ಯಾ ಬಾಬಾಚ್ಯಾ ಘರಾಕ್ಡೆ ಜಾವ್ಕಲಾಲೊ,ತೊ ಘರಾಕ್ನಾ ಧುರ್ ರ್‍ಹಾತಾನಾಚ್, ಬಾಬಾನ್ ತೆಕಾ ಬಗಟ್ಲ್ಯಾನ್; ತೆಕಾ ಬಗುನ್, ತೆಚೊ ಮನ್‍ ಚುಟ್ಮುಟ್ಲೊ, ಅನಿ ತೊ ಪಳುನ್ ಗೆಲೊ, ಅನಿ ಅಪ್ನಾಚ್ಯಾ ಹಾತಾನಿ ತೆಕಾ ಯಾಂಗ್ ಮಾರ್‍ಲ್ಯಾನ್,ಅನಿ ತೆಚಿ ಉಪ್ಪಾ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:20
22 ತಿಳಿವುಗಳ ಹೋಲಿಕೆ  

ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.


ಬಳಿಕ ಜೋಸೆಫನು ತನ್ನ ತಮ್ಮ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೆಯಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ಅರಸನು ಅವನಿಗೆ ಮುದ್ದಿಟ್ಟನು.


ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ,’ ಎಂದುಕೊಂಡ.


ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು