Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:27 - ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಳು ಅವನಿಗೆ - ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತವಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಸೇವಕನು, ‘ನಿನ್ನ ತಮ್ಮ ಮರಳಿ ಬಂದಿದ್ದಾನೆ. ನಿನ್ನ ತಂದೆಯು ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ. ನಿನ್ನ ತಮ್ಮನು ಮನೆಗೆ ಸುರಕ್ಷಿತವಾಗಿ ಬಂದದ್ದಕ್ಕಾಗಿ ನಿನ್ನ ತಂದೆಯು ಸಂತೋಷಗೊಂಡಿದ್ದಾನೆ!’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತ್ಯಾ ಆಳಾನ್ ತೆಕಾ “ತುಜೊ ಭಾವ್ ಪರ್ತುನ್ ಘರಾಕ್ ಯೆಲಾ, ಅನಿ ತುಜ್ಯಾ ಬಾಬಾನ್ ತೆಚೆಸಾಟ್ನಿ ಎಕ್ ಬರೊ ಪುಟ್ಪುಟಿತ್ ಪಾಡ್ಕು ಮಾರುಕ್ ಲಾವ್ಲ್ಯಾನಾಯ್, ತುಜೊ ಭಾವ್ ಸುರಕ್ಷಿತ್ ಪರ್ತುನ್ ಯೆಲಾ ಮನುನ್. ಹ್ಯೊ ಅವಾಜ್ ಹೊವ್ಲಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:27
8 ತಿಳಿವುಗಳ ಹೋಲಿಕೆ  

ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?


ಅವನು ಬಂದು ನನ್ನ ಬಳಿ ನಿಂತು, ‘ಸಹೋದರ ಸೌಲನೇ, ದೃಷ್ಟಿಯನ್ನು ಪಡೆ,’ ಎಂದನು. ಆ ಕ್ಷಣವೇ ನಾನು ದೃಷ್ಟಿಪಡೆದು ಅವನನ್ನು ನೋಡಿದೆ.


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.


ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆ ಶೀಘ್ರವಾಗಿ ಅದನ್ನು ಕೊಯ್ದು, ಪಕ್ವಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,


ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.


‘ಮನೆಯಲ್ಲೇನು ವಿಶೇಷ?’ ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ.


“ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು