Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:32 - ಕನ್ನಡ ಸತ್ಯವೇದವು C.L. Bible (BSI)

32 ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಅತ್ತಾ ಅಮಿ ಗರ್‍ದಿ ಕರುಕ್ ಪಾಜೆ, ಕುಶಿ ಹೊವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ಮರಲ್ಲೊ ತುಜೊ ಭಾವ್ ಝಿತ್ತೊ ಹೊವ್ನ್ ಯೆಲಾ,ಕಳ್ದುನ್ ಗೆಲ್ಲೊ ಖರೆ ಅತ್ತಾ ತೊ ಅಮ್ಕಾ ಗಾವ್ಲಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:32
13 ತಿಳಿವುಗಳ ಹೋಲಿಕೆ  

ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ಆಗ ತಂದೆ ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು