Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:5 - ಕನ್ನಡ ಸತ್ಯವೇದವು C.L. Bible (BSI)

5 ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಿಕ್ಕಿದ ಮೇಲೆ ಅವನು ಸಂತೋಷಪಡುತ್ತಾ ಅದನ್ನು ತನ್ನ ಹೆಗಲಿನ ಮೇಲೆ ಇಟ್ಟುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಆ ಕುರಿಯನ್ನು ಕಂಡುಕೊಂಡಾಗ ಬಹು ಸಂತೋಷಪಡುವನು. ಅವನು ಆ ಕುರಿಯನ್ನು ತನ್ನ ಮನೆಗೆ ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದು ಸಿಕ್ಕಿದ ಮೇಲೆ ಸಂತೋಷಪಡುತ್ತಾ ಅದನ್ನು ತನ್ನ ಹೆಗಲ ಮೇಲೆ ಎತ್ತಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆ ಗಾವಲ್ಲ್ಯಾ ತನ್ನಾ, ತೆಕಾ ಲೈ ಕುಶಿ ಹೊತಾ, ತಸೆ ಮನುನ್ ತೊ ತೆಕಾ ಅಪ್ನಾಚ್ಯಾ ಖಾಂಜ್ಯಾರ್ ಥವ್ನ್ ಘೆತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:5
31 ತಿಳಿವುಗಳ ಹೋಲಿಕೆ  

ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


“ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ?


ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು