Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:6 - ಕನ್ನಡ ಸತ್ಯವೇದವು C.L. Bible (BSI)

6 ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಅವರಿಗೆ ಹೇಳುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ತನ್ನ ಸ್ನೇಹಿತರ ಮತ್ತು ನೆರೆಹೊರೆಯವರ ಬಳಿಗೆ ಹೋಗಿ, ‘ನನ್ನೊಡನೆ ಸಂತೋಷಪಡಿರಿ, ಕಳೆದುಹೋದ ನನ್ನ ಕುರಿ ಸಿಕ್ಕಿತು’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆಕಾ, ಘರಾಕ್ ಹಾನ್ತಾ, ತನ್ನಾ ಅಪ್ನಾಚ್ಯಾ ದೊಸ್ತಾಕ್ನಿ, ಅನಿ ಅಜು-ಬಾಜುಚ್ಯಾಕ್ನಿ ಬಲ್ವುನ್ ಮಾಕಾ ಲೈ ಕುಶಿ ಹೊವ್ಲಾ, ಕಶ್ಯಾಕ್ ಮಟ್ಲ್ಯಾರ್, ಚುಕುನ್ ಗೆಲ್ಲೆ ಮಾಜೆ ಬಕ್ರೆ, ಮಾಕಾ ಗಾವ್ಲೆ, ಯೆವಾ, ಅಮಿ ಗರ್‍ದಿ ಕರುವಾ! ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:6
19 ತಿಳಿವುಗಳ ಹೋಲಿಕೆ  

“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.


ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ.


ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.


ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು