Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:8 - ಕನ್ನಡ ಸತ್ಯವೇದವು C.L. Bible (BSI)

8 “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದುಹೋದರೆ ದೀಪಾಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಒಬ್ಬ ಸ್ತ್ರೀಯು ತನ್ನ ಬಳಿ ಹತ್ತು ಬೆಳ್ಳಿಯ ನಾಣ್ಯವಿರಲಾಗಿ, ಒಂದು ನಾಣ್ಯವನ್ನು ಕಳೆದುಕೊಂಡರೆ, ಅವಳು ದೀಪಹಚ್ಚಿ ಮನೆಯನ್ನು ಗುಡಿಸಿ, ಅದು ಸಿಕ್ಕುವವರೆಗೆ ಜಾಗ್ರತೆಯಿಂದ ಹುಡುಕುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 “ನಾಹೊಲ್ಯಾರ್, ಧಾ ಚಾಂದಿಚೆ ಪೈಸೆ ಹೊತ್ತಿ ಎಕ್ ಬಾಯ್ಕೊಮಾನುಸ್, ತ್ಯಾತುರ್‍ಲಿ ಎಕ್ ಗಾಲಿ ಕಳ್ದುನ್ ಘೆತಾ ತನ್ನಾ ತಿ ಕಾಯ್ ಕರ್‍ತಾ? ತಿ, ಎಕ್ ಚಿಮ್ನಿ ಪೆಟ್ವುತಾ, ಸಗ್ಳೆ ಘರ್ ಝಾಡ್ತಾ! ಅನಿ ತೊ ಪೈಸೊ ಗಾವಿ ಪತರ್, ಸಗ್ಳ್ಯಾಕ್ಡೆ ಬರೆ ಕರುನ್ ಹುಡಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:8
9 ತಿಳಿವುಗಳ ಹೋಲಿಕೆ  

ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.


ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?


ಮಾಯಮಂತ್ರಮಾಡುತ್ತಿದ್ದ ಅನೇಕರು ತಮ್ಮ ಪುಸ್ತಕಗಳನ್ನು ತೆಗೆದುಕೊಂಡು ಬಂದು ಅವುಗಳನ್ನು ಎಲ್ಲರ ಮುಂದೆ ಸುಟ್ಟುಹಾಕಿದರು. ಆ ಪುಸ್ತಕಗಳ ಬೆಲೆಯನ್ನು ಎಣಿಕೆಮಾಡಿದಾಗ ಅದರ ಮೊತ್ತ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು