Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:11 - ಕನ್ನಡ ಸತ್ಯವೇದವು C.L. Bible (BSI)

11 ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೌಕಿಕ ಐಶ್ವರ್ಯಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ಪರಲೋಕದ ಐಶ್ವರ್ಯಗಳಲ್ಲಿಯೂ ನೀವು ನಂಬಿಗಸ್ತರಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜರ್, ತುಮ್ಕಾ ಹ್ಯಾ ಜಗಾತ್ಲಿ ವಿಶಯಾಚ್ ಸಂಬಾಳುಕ್ ಹೊಯ್‍ನ್ಯಾತ್, ತರ್ ಖರ್‍ಯಾ, ಅನಿ ಲೈ ಕಿಮ್ತಿಚ್ಯಾ ಸರ್‍ಗಾ ವೈಲ್ಯಾ ಜವಾಬ್ದಾರಿಕ್ ತುಮಿ ಕಶೆ ವಿಶ್ವಾಸಾನ್ ರ್‍ಹಾವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:11
9 ತಿಳಿವುಗಳ ಹೋಲಿಕೆ  

ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು