Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:13 - ಕನ್ನಡ ಸತ್ಯವೇದವು C.L. Bible (BSI)

13 “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಎಕ್ ಆಳಾನ್ ದೊನ್ ಧನಿಯಾಂಚಿ ಸೆವಾ ಕರುಕ್ ಹೊಯ್ನಾ; ತೊ ಆಳ್ ಎಕ್ಲ್ಯಾಚೊ ದ್ವೆಶ್ ಕರ್‍ತಾ, ಅನಿ ಎಕ್ಲ್ಯಾಚೊ ಪ್ರೆಮ್ ಕರ್‍ತಾ. ಎಕ್ಲ್ಯಾಕ್ ತೊ ವಿಶ್ವಾಸಾನ್ ರ್‍ಹಾತಾ,ಅನಿ ಎಕ್ಲ್ಯಾಕ್ ತೊ ವಿಶ್ವಾಸಾನ್ ರ್‍ಹಾಯ್ನಾ. “ತುಮಿ ದೆವಾಚಿಬಿ, ಪೈಸ್ಯಾಂಚಿಬಿ ಸೆವಾ ಕರುಕ್ ಹೊಯ್ನಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:13
12 ತಿಳಿವುಗಳ ಹೋಲಿಕೆ  

“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


“ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ,” ಎಂದರು.


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.


ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು