Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:2 - ಕನ್ನಡ ಸತ್ಯವೇದವು C.L. Bible (BSI)

2 ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಅವನು ಆ ಮೇಲ್ವಿಚಾರಕನನ್ನು ಕರೆದು, ‘ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆಚೆಸಾಟ್ನಿ ತೆನಿ, ತ್ಯಾ ಕಾರ್‍ಬಾರ್‍ಯಾಕ್ ಬಲ್ವುಲ್ಯಾನ್, ಅನಿ ತುಜ್ಯಾ ವಿಶಯಾತ್ ಹೆ ಕಾಯ್ ಆಯ್ಕುಲಾ ಮಿಯಾ? ಅನಿ ಫಿಡೆ ತಿಯಾ ಮಾಜ್ಯಾ ಆಸ್ತಿಚೊ ಕಾರ್ಬಾರಿ ಹೊವ್ನ್ ರ್‍ಹಾತಲೆ ನಕ್ಕೊ, ಲಗ್ಗುನಾ ಕಾಯ್ ಹೊತ್ತೊ ಲೆಕ್ಕ್ ಮಾಕಾ ಹಾನುನ್ ಒಪಸ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:2
23 ತಿಳಿವುಗಳ ಹೋಲಿಕೆ  

ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.


ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ.


ನಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕವನ್ನು ಒಪ್ಪಿಸಬೇಕು.


ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


“ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.


ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು