Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:21 - ಕನ್ನಡ ಸತ್ಯವೇದವು C.L. Bible (BSI)

21 ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವನು ಮೈತುಂಬಾ ಹುಣ್ಣೆದ್ದವನು; ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಐಶ್ವರ್ಯವಂತನು ಊಟ ಮಾಡಿದ ಮೇಲೆ ಹೊರಗೆಸೆದ ಎಂಜಲನ್ನು ತಿನ್ನುವುದಕ್ಕಾಗಿ ಅಲ್ಲಿ ಬಿದ್ದುಕೊಂಡಿರುತ್ತಿದ್ದನು. ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತ್ಯಾ ಸಾವ್ಕಾರ್ ಮಾನ್ಸಾಚ್ಯಾ ಜೆವ್ನಾಚ್ಯಾ ಜೆವ್ತಾನಾ ಪಡಲ್ಲೆ ಉಸ್ಟೆ ತರ್‍ಬಿ ಅಪ್ನಾಕ್ ಖಾವ್ಕ್ ಗಾವ್ತಾ ,ಮನುನ್ ತೊ ರಾಕುನ್ಗೆತ್ ರ್‍ಹಾಯ್. ಕುತ್ರಿ ಸೈತ್ ಯೆವ್ನ್ ತೆಚ್ಯಾ ದುಕ್ಕಾಕ್ನಿ ಚಾಟಿತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:21
7 ತಿಳಿವುಗಳ ಹೋಲಿಕೆ  

ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.


ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.


ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು.


ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು.


“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು