Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:22 - ಕನ್ನಡ ಸತ್ಯವೇದವು C.L. Bible (BSI)

22 “ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೊ ಗರಿಬ್ ಮಾನುಸ್ ಮರ್‍ಲೊ, ಅನಿ ತೆಕಾ ಸರ್‍ಗಾ ವೈಲ್ಯಾ ದುತಾನಿ, ಉಕ್ಲುನ್ ನ್ಹೆವ್ನ್ ಸರ್‍ಗಾ ವೈಲ್ಯಾ ಸನಾಚ್ಯಾ ಜೆವ್ನಾಕ್, ಅಬ್ರಾಹಾಮಾಚ್ಯಾ ಬಾಜುಕುಚ್ ನ್ಹೆವ್ನ್ ಬಸ್ವುಲ್ಯಾನಿ. ತೊ ಸಾವ್ಕಾರ್ ಮಾನುಸ್‍ಬಿ ಮರ್‍ಲೊ, ಅನಿ ತೆಕಾ ಮಾಟಿ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:22
28 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,


ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದು, ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಬರುವ ಲಾಭವಾದರೂ ಏನು?


ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?


ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು.


ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು