Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:23 - ಕನ್ನಡ ಸತ್ಯವೇದವು C.L. Bible (BSI)

23 ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ನರ್‍ಕಾತ್ ಮೊಟ್ಯಾ ವಳ್ವಳ್ಯಾಚ್ಯಾ ಜಾಗ್ಯಾತ್, ತೊ ಹೊತ್ತೊ. ಥೈತ್ನಾ ತೆನಿ ವೈರ್ ಬಗಟಲ್ಲ್ಯಾ ತನ್ನಾ, ತೆಕಾ ಅಬ್ರಾಮ್ ದಿಸ್ಲೊ ಥೈತ್ನಾ ತೊ ಧುರ್ ಹೊತ್ತೊ, ಅನಿ ಲಾಜರಸ್ ಅಬ್ರಾಹಾಮಾಚ್ಯಾ ಬಾಜುಕುಚ್ ಬಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:23
26 ತಿಳಿವುಗಳ ಹೋಲಿಕೆ  

ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.


ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.


ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.


ಸಾವಿಗೆ ಸೋಲಾಯಿತು, ಜಯವು ಸಂಪೂರ್ಣವಾಯಿತು. ಎಲೈ ಸಾವೇ, ನಿನ್ನ ಜಯವೆಲ್ಲಿ? ಎಲೈ ಸಾವೇ, ನಿನ್ನ ವಿಷಕೊಂಡಿಯೆಲ್ಲಿ?


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು.


ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು