Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:24 - ಕನ್ನಡ ಸತ್ಯವೇದವು C.L. Bible (BSI)

24 ‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತೊ ಸಾವ್ಕಾರ್ ಮಾನುಸ್, “ಅಬ್ರಾಹಾಮ್ ಬಾಬಾ! ಮಾಜೆ ವರ್‍ತಿ ದಯಾ ಕರ್, ಅನಿ ಲಾಜರಸಾಕ್ ತೆಚಿ ಬೊಟ್ ಪಾನಿಯಾತ್ ಬುಡ್ವುನ್, ಎಕ್ ಠೆಂಬೊ ಮಾಜ್ಯಾ ಜಿಬ್ಲಿ ವರ್‍ತಿ ಘಾಲುನ್‍ ಥಂಡ್ ಕರುಕ್, ತೆಕಾ ಮಾಜೆಕ್ಡೆ ಧಾಡುನ್ ದಿ, ಕಶ್ಯಾಕ್ ಮಟ್ಲ್ಯಾರ್, ಮಿಯಾ ಹ್ಯಾ ಆಗಿತ್ ವಳ್ವಳುಲಾಲಾ!” ಮನುನ್ ಬೊಬ್ ಮಾರುನ್ ಸಾಂಗುಕಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:24
29 ತಿಳಿವುಗಳ ಹೋಲಿಕೆ  

ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ?


ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?


ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು