Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:26 - ಕನ್ನಡ ಸತ್ಯವೇದವು C.L. Bible (BSI)

26 ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಡೊಂಗರ ಸ್ಥಾಪಿಸಿಯದೆ; ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು; ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರೂ ದಾಟುವದಕ್ಕಾಗದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹೆಚ್ಯಾ ಭಾಯ್ರ್ ಸಾಂಗುಚೆ ಜಾಲ್ಯಾರ್, ತುಮ್ಚ್ಯಾ ಅನಿ ಅಮ್ಚ್ಯಾ ಮದ್ದಿ,ಎಕ್ ಮೊಟೊ ಅಂತರ್ ಹಾಯ್ , ಅಮ್ಚ್ಯೆಕ್ನಾ ತುಮ್ಚ್ಯಾಕ್ಡೆ ಮನುನ್ ಯವಜ್ಲ್ಯಾರ್, ಕೊನಾಕ್ಬಿ ಯೆವ್ಕ್ ಹೊಯ್ನಾ, ಅನಿ ತುಮ್ಚ್ಯಾಕ್ನಾ, ಅಮ್ಚೆಕ್ಡೆ ಕೊನ್ಬಿ ಯೆವ್ಕ್ ಬಗಟ್ಲ್ಯಾರ್‍ಬಿ ತೆಕಾ ಹಿಕ್ಡಿ ಯೆವ್ಕ್ ಹೊಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:26
15 ತಿಳಿವುಗಳ ಹೋಲಿಕೆ  

ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.


ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು