ಲೂಕ 16:3 - ಕನ್ನಡ ಸತ್ಯವೇದವು C.L. Bible (BSI)3 ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಆಗ, ಆ ಮೇಲ್ವಿಚಾರಕನು ತನ್ನೊಳಗೆ, ‘ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ತ್ಯಾ ಕಾರ್‍ಬಾರ್‍ಯಾನ್ ಅಪ್ನಾಚ್ಯಾ ಮನಾತುಚ್ “ಅತ್ತಾ ಜಾಲ್ಯಾರ್, ಮಾಜೊ ಧನಿ ಮಾಕಾ ಮಾಜ್ಯಾ ಕಾಮಾ ವೈನಾ ಕಾಡ್ನಾರ್ ಹಾಯ್,ಮಿಯಾ ಅತ್ತಾ ಕಾಯ್ ಕರು? ಖಂಡುಕ್ ಮಾಕಾ ಬಳ್ ನಾ, ಅನಿ ಭಿಕ್ ಮಾಗುಕ್ ಮಾಕಾ ಲಜ್ಜಾ ಕರ್‍ತಾ”. ಅಧ್ಯಾಯವನ್ನು ನೋಡಿ |