Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:6 - ಕನ್ನಡ ಸತ್ಯವೇದವು C.L. Bible (BSI)

6 ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು - ನೂರು ಬುದ್ದಲಿ ಎಣ್ಣೆ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಕೂತುಕೊಂಡು ಐವತ್ತು ಬುದ್ದಲಿ ಅಂತ ಬರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಮೊದಲನೆಯ ವ್ಯಕ್ತಿ, ‘ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಸೆಂಬರ್ ಡಬ್ಬೆ ತೆಲ್” ಮನುನ್ ತೆನಿ ಸಾಂಗಟ್ಲ್ಯಾನ್, ತೆನಿ‍ ತೆಕಾ “ಹ್ಯೊ ಘೆ ಹಿತ್ತೆ ಹಾಯ್ ತುಜೊ ಲೆಕ್ಕ್, ಬಸ್ ಅನಿ ಪನ್ನಾಸ್ ಮನುನ್ ಲಿವ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:6
7 ತಿಳಿವುಗಳ ಹೋಲಿಕೆ  

ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.


ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


“ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.


ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ.


ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.


ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು