Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:8 - ಕನ್ನಡ ಸತ್ಯವೇದವು C.L. Bible (BSI)

8 “ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 “ಅಶೆ ಹ್ಯಾ ಕಾರ್‍ಬಾರ್‍ಯಾನ್ ಎವ್ಡೆ ಶಾನೆಪಾನ್ ವಾಪರಲ್ಲೆ ಬಗುನ್, ಸಾವ್ಕಾರಾನ್ ತೆಕಾ ಶಬಾಸ್ಕಿ ದಿಲ್ಯಾನ್. ಕಶ್ಯಾಕ್ ಮಟ್ಲ್ಯಾರ್, ಹ್ಯಾ ಜಗಾತ್ಲ್ಯಾ ಲೊಕಾಕ್ನಿ, ತೆಂಚಿ ವಿಶಯಾ ಕಶಿ ಕರುನ್ ಸಂಬಾಳ್ತಲಿ ಮನುನ್, ದೆವಾಚ್ಯಾ ವಾಟೆನ್ ಚಲ್ತಲ್ಯಾ ಲೊಕಾಂಚ್ಯಾನ್ಕಿ, ಬರೆ ಗೊತ್ತ್ ಹಾಯ್”,ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:8
23 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.


ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ.


ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.


ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.


ಅದಕ್ಕೆ ಯೇಸು, “ಈ ಲೋಕದ ಜೀವನದಲ್ಲಿ ಜನರು ಮದುವೆ ಮಾಡಿಕೊಳ್ಳುತ್ತಾರೆ, ಮದುವೆ ಮಾಡಿಕೊಡುತ್ತಾರೆ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ?


ಯೇಸು, “ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ?


ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.


ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು