Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಶಿಷ್ಯರಿಗೆ: “ಜನರಿಗೆ ಪಾಪದ ಶೋಧನೆಗಳು ಬಂದೇ ಬರುತ್ತವೆ, ಆದರೆ ಅವು ಯಾರಿಂದ ಬರುತ್ತವೋ ಅವರಿಗೆ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಲೊಕಾಕ್ನಿ ಪಾಪಾತ್ ಪಾಡ್ವುತಲಿ ಕಾಮಾ ಹೊವ್ಕುಚ್ ಪಾಜೆ, ಖರೆ, ಹಿ ಪಾಪಾತ್ ಪಡಿಸರ್ಕೆ ಕತರ್ಲಿ ಕಾಮಾ ಕರ್‍ತಲ್ಯಾಚಿ ಗತ್ ಮಿಯಾ ಕಾಯ್ ಸಾಂಗು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:1
14 ತಿಳಿವುಗಳ ಹೋಲಿಕೆ  

ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!


ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.


ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು