Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:16 - ಕನ್ನಡ ಸತ್ಯವೇದವು C.L. Bible (BSI)

16 ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೇಸುವಿನ ಪಾದಗಳಿಗೆ ಅಡ್ಡ ಬಿದ್ದು ಆತನಿಗೆ ಉಪಕಾರಸ್ತುತಿಮಾಡಿದನು. ಅವನು ಸಮಾರ್ಯದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೊ ಜೆಜುಚ್ಯಾ ಪಾಂಯಾತ್ನಿ ಪಡ್ಲೊ ಅನಿ ಜೆಜುಕ್ ತೆನಿ ಧನ್ಯವಾದ್ ದಿಲ್ಯಾನ್. ತೊ ಸಮಾರಿಯಾಚೊ ಎಕ್ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:16
21 ತಿಳಿವುಗಳ ಹೋಲಿಕೆ  

ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಆಗ ಯೇಸು, “ಹತ್ತುಮಂದಿ ಗುಣಹೊಂದಿದರಲ್ಲವೆ? ಮಿಕ್ಕ ಒಂಬತ್ತು ಮಂದಿ ಎಲ್ಲಿ?


ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು