Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:24 - ಕನ್ನಡ ಸತ್ಯವೇದವು C.L. Bible (BSI)

24 ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾಕಂದರೆ ವಿುಂಚು ವಿುಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಹೇಗೆ ಹೊಳೆಯುವದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಮನುಷ್ಯಕುಮಾರನು ಬಂದಾಗ ನಿಮಗೇ ಗೊತ್ತಾಗುವುದು. ಆಕಾಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಹೊಳೆಯುವ ಮಿಂಚಿನಂತೆ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಶ್ಯಾಕ್ ಮಟ್ಲ್ಯಾರ್ ಮಳ್ಬಾ ವರ್‍ತಿ ಎಕ್ ದಿಕ್ಕಾಕ್ನಾ, ಅನಿಎಕಾ ದಿಕ್ಕಾ ಪತರ್ ಮಿಂಚ್ ಮಾರುಕ್ ಲಾಗಲ್ಲ್ಯಾ ತನ್ನಾ,ಮಿಯಾ ಮಾನ್ಸಾಚೊ ಲೆಕ್ ಯೆತಲಿ ದಿಸಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:24
16 ತಿಳಿವುಗಳ ಹೋಲಿಕೆ  

ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.


ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ ಹಿಂದಕ್ಕೂ ಸರಿದಾಡುತ್ತಿದ್ದವು.


ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು