Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:25 - ಕನ್ನಡ ಸತ್ಯವೇದವು C.L. Bible (BSI)

25 ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ನಿರಾಕರಿಸಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಅದಕ್ಕಿಂತಲೂ ಮೊದಲು, ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಿ ಈ ಕಾಲದ ಜನರಿಂದ ತಿರಸ್ಕರಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ, ಅದ್ದಿ ತೊ ಕಸ್ಟ್ ಸೊಸುಕ್ ಪಾಜೆ, ಅನಿ ಅತ್ತಾಚ್ಯಾ ಕಾಲಾಚ್ಯಾ ಲೊಕಾನಿ ತೆಕಾ ಧುರ್ ಕರುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:25
18 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.


ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಕೊರಡೆಗಳಿಂದ ಹೊಡೆಯುವರು ಮತ್ತು ಕೊಂದುಹಾಕುವರು. ಆತನಾದರೋ ಮೂರನೆಯ ದಿನ ಪುನರುತ್ಥಾನ ಹೊಂದುವನು,” ಎಂದರು.


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.


“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.


ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು