Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:27 - ಕನ್ನಡ ಸತ್ಯವೇದವು C.L. Bible (BSI)

27 ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ನೊಯೆ ಢೊನಿತ್ ಭುತ್ತುರ್ ಗುಸಿ ಪತರ್, ಸಗ್ಳೆ ಜಾನಾ ಖಾವ್ನಗೆತ್, ಫಿವ್ನಗೆತ್, ಅನಿ ಘೊಮನ್ಸಾ ಬಾಯ್ಕೊಮನ್ಸಾ ನಗಿನ್ ಹೊವ್ನಗೆತ್ ಹೊತ್ತ್ಯಾನಿ, ಅನಿ ಸಗ್ಳ್ಯಾಕ್ಡೆ ಪಾನಿ ಭರುನ್ ಯೆಲೆ, ಅನಿ ತೆಂಕಾ ಜಿವಾನಿ ಮಾರುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:27
16 ತಿಳಿವುಗಳ ಹೋಲಿಕೆ  

ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ಆ ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಮಡದಿ, ಮಕ್ಕಳು, ಸೊಸೆಯರ ಸಮೇತ ನಾವೆಯನ್ನು ಹತ್ತಿದನು.


ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.


ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ.


ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.


ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು