Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:28 - ಕನ್ನಡ ಸತ್ಯವೇದವು C.L. Bible (BSI)

28 ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮತ್ತು ಲೋಟನ ದಿವಸಗಳಲ್ಲಿ ನಡೆದ ಪ್ರಕಾರ ನಡೆಯುವದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಳ್ಳುತ್ತಿದ್ದರು, ಮಾರುತ್ತಿದ್ದರು, ನೆಡುತ್ತಿದ್ದರು, ಕಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಜನರೆಲ್ಲರೂ ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಲೊಟಾಚ್ಯಾ ಕಾಲಾತ್ ಹೊಲ್ಲ್ಯಾ ಸರ್ಕೆ, ಸಗ್ಳೆ ಜಾನಾ ಜೆವ್ನಗೆತ್, ಫಿವ್ನಗೆತ್, ಇಕುನ್ಗೆತ್-ಇಕಾತ್ ಘೆವ್ನ್‌ಗೆತ್, ಶೆತಾ ಕರುನ್ಗೆತ್, ಅನಿ ಭಾಂದುನ್ಗೆತ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:28
9 ತಿಳಿವುಗಳ ಹೋಲಿಕೆ  

ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.


ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.


ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು