Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:29 - ಕನ್ನಡ ಸತ್ಯವೇದವು C.L. Bible (BSI)

29 ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ಲೊಟ್ ಸೊದೊಮಾತ್ನಾ ಭಾಯ್ರ್ ಪಡಲ್ಲ್ಯಾ ತನ್ನಾ, ಮಳ್ಬಾ ವೈನಾ ಆಗ್ ಅನಿ ಆಗಿಚ್ಯಾ ಇಂಗ್ಳ್ಯಾಂಚೊ ಪಾವ್ಸ್ ಯೆಲೊ, ಅನಿ ತೆಂಕಾ ಸಗ್ಳ್ಯಾಕ್ನಿ ಜಿವಾನಿಚ್ ಮಾರುನ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:29
16 ತಿಳಿವುಗಳ ಹೋಲಿಕೆ  

ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.


ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು