Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:1 - ಕನ್ನಡ ಸತ್ಯವೇದವು C.L. Bible (BSI)

1 ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ, ಕನ್ನಾಬಿ ಕಂಟಾಳಿನಸ್ತನಾ ಮಾಗ್ನಿ ಕರುನ್ಗೆತ್ ರ್‍ಹಾತಲೆ ಶಿಕ್ವುಸಾಟ್ನಿ ಮನುನ್, ಹಿ ಕಾನಿ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:1
26 ತಿಳಿವುಗಳ ಹೋಲಿಕೆ  

ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.


ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು.


ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು