Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:10 - ಕನ್ನಡ ಸತ್ಯವೇದವು C.L. Bible (BSI)

10 “ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದೇನಂದರೆ - ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 “ಎಗ್ದಾ ದೊಗೆ ಜಾನಾ ಹೊತ್ತೆ, ತೆನಿ ದೊಗೆಬಿ ಮಾಗ್ನಿ ಕರುಕ್ ಮನುನ್ ದೆವಾಚ್ಯಾ ಗುಡಿಕ್‍ ಗೆಲ್ಲ್ಯಾನಿ. ಎಕ್ಲೊ ಎಕ್ ಫಾರಿಜೆವ್, ಅನಿ ಅನಿ ಎಕ್ಲೊ ತೆರ್‍ಗಿ ವಸುಲ್ ಕರ್‍ತಲೊ ಪಾಪಿ ಮಾನುಸ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:10
13 ತಿಳಿವುಗಳ ಹೋಲಿಕೆ  

“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,


ನಮ್ಮ ಧರ್ಮದ ಅತಿ ಕಟ್ಟುನಿಟ್ಟಾದ ಪಂಥವೆಂದರೆ ಫರಿಸಾಯಪಂಥ. ಅದರ ಅನುಯಾಯಿ ಆಗಿದ್ದೆ ನಾನು. ಇದನ್ನು ಮೊದಲಿನಿಂದ ಅರಿತಿರುವ ಅವರೇ ಮನಸ್ಸುಮಾಡಿದರೆ ಸಾಕ್ಷಿಹೇಳಬಲ್ಲರು.


ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.


“ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು.


ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.


ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು