Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:11 - ಕನ್ನಡ ಸತ್ಯವೇದವು C.L. Bible (BSI)

11 ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಫಾರಿಜೆವ್ ಅಪ್ನಾಚ್ಯಾ ಎವ್ಡ್ಯಾಕ್ ಧುರುಚ್ ಇಬೆ ರ್‍ಹಾಲೊ, ಅನಿ ದೆವಾ ಮಿಯಾ ತುಕಾ ಧನ್ಯವಾದ್ ದಿತಾ. ಮಿಯಾ ಸಗ್ಳ್ಯಾಂಚ್ಯಾ ಸರ್ಕೊ, ಅಸ್‍ಬುರ್ಕೊ, ಸಾಂಗಟಲ್ಲೆ ಕರಿನಸಲ್ಲೊ, ನಾ ಹೊಲ್ಯಾರ್, ಎಕ್ ವೆಭಿಚಾರ್ ಕರ್‍ತಲೊ ಮಾನುಸ್ ನ್ಹಯ್. ಮಿಯಾ ತಬಕ್, ತ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾ ಪಾಪಿ ಮಾನ್ಸಾ ಸಾರ್ಕೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:11
26 ತಿಳಿವುಗಳ ಹೋಲಿಕೆ  

“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ಕೀರ್ತಿಸಿರಿ ಪ್ರಭುವನು ಆತನ ಮಂದಿರದಲ್ಲಿರುವವರೇ I ನಮ್ಮ ದೇವಾಲಯದ ಪ್ರಾಕಾರದಲ್ಲಿಹ ಸೇವಕರೇ II


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು