Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:12 - ಕನ್ನಡ ಸತ್ಯವೇದವು C.L. Bible (BSI)

12 ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ವಾರಕ್ಕೆ ಎರಡಾವರ್ತಿ ಉಪವಾಸ ಮಾಡುತ್ತೇನೆ; ನಾನು ಸಂಪಾದಿಸುವ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಮಿಯಾ ವಾರಾತ್ ದೊನ್ ದಿಸ್ ಉಪಾಸ್ ಕರ್‍ತಾ, ಅನಿ ಮಾಜ್ಯಾ ಉತ್ಪನ್ನಾತ್ಲೊ ಧಾತ್ಲೊ ಎಕ್ ವಾಟೊ ತುಕಾ ದಿತಾ”, ಮನುನ್ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:12
24 ತಿಳಿವುಗಳ ಹೋಲಿಕೆ  

“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು.


ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.


ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು.


ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


“ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.


ದೇವರು ಬಿಳಾಮನಿಗೆ ಎದುರಾಗಿ ಬಂದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದ್ದೇನೆ,” ಎಂದು ಹೇಳಿದನು.


ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.”


ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು