ಲೂಕ 18:14 - ಕನ್ನಡ ಸತ್ಯವೇದವು C.L. Bible (BSI)14 “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.