Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:30 - ಕನ್ನಡ ಸತ್ಯವೇದವು C.L. Bible (BSI)

30 ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನಿಗೆ ಈಗಿನ ಕಾಲದಲ್ಲಿ ಅನೇಕ ಪಾಲು ಹೆಚ್ಚಾದವುಗಳು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೊ ತೆಚ್ಯಾ ಜಿವನಾತ್, ತೆಚೆನ್ಕಿ ಜಾಸ್ತಿಚೆ ಘೆತಾ. ಅನಿ ಆಕ್ರಿಚ್ಯಾ ಕಾಲಾತ್ ಕನ್ನಾಚ್ ಮರಾನ್ ನಸ್ತಾನಾ ಝಿತ್ತೊ ರ್‍ಹಾತಲೆ ಭಾಗ್‍ಬಿ ತೆಕಾ ಗಾವ್ತಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:30
19 ತಿಳಿವುಗಳ ಹೋಲಿಕೆ  

ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II


ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು