Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:31 - ಕನ್ನಡ ಸತ್ಯವೇದವು C.L. Bible (BSI)

31 ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜೆಜುನ್ ಬಾರಾ ಶಿಸಾಕ್ನಿ ಬಲ್ವುನ್ ಘೆಟ್ಲ್ಯಾನ್, ಅನಿ ತೆಂಕಾ, “ಆಯ್ಕಾ! ಅತ್ತಾ ಅಮಿ ಜೆರುಜಲೆಮಾಕ್ ಜಾವ್ಕ್ ಲಾಗ್ಲಾಂವ್, ಥೈ ಪ್ರವಾದ್ಯಾನ್, ಮಾನ್ಸಾಚ್ಯಾ ಲೆಕಾಚ್ಯಾ ವಿಶಯಾತ್ ಲಿವಲ್ಲೆ ಸಗ್ಳೆ ಖರೆ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:31
17 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.


ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಊಟಮಾಡಿದವರ ಸಂಖ್ಯೆ ನಾಲ್ಕು ಸಾವಿರ.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು