Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:38 - ಕನ್ನಡ ಸತ್ಯವೇದವು C.L. Bible (BSI)

38 ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವನು - ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆ ಕುರುಡನು ಗಟ್ಟಿಯಾಗಿ, “ಯೇಸುವೇ, ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ತೊ, “ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್”, ಮನುನ್ ಬೊಬ್ ಮಾರುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:38
14 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.


ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


“ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


“ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು