Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:39 - ಕನ್ನಡ ಸತ್ಯವೇದವು C.L. Bible (BSI)

39 ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಇದ್ರಾಕ್ ಹೊತ್ತ್ಯಾ ಲೊಕಾನಿ ಗಪ್‍ರಾಮ್ ಮನುನ್ ತೆಕಾ ಡೊಳೆ ಕಾಡ್ಲ್ಯಾನಿ, ಖರೆ ತೊ, ಅನಿ ಉಲ್ಲೆ ಜೊರಾನಿ,“ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್!” ಮನುನ್ ಬೊಬ್ ಮಾರುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:39
16 ತಿಳಿವುಗಳ ಹೋಲಿಕೆ  

ಬೇಗನೆ ಬಾ ಪ್ರಭು, ಮೊರೆಯಿಡುವೆ ನಿನಗೆ I ಮೊರೆಯಿಡುವಾಗಲೆಲ್ಲ ಕಿವಿಗೊಡು ನನಗೆ II


ಕೆಲವರು ತಮ್ಮ ಹಸುಳೆಗಳನ್ನು ಯೇಸುಸ್ವಾಮಿ ಮುಟ್ಟಿ ಹರಸಬೇಕೆಂದು ಅಲ್ಲಿಗೆ ಕರೆತಂದರು. ಇದನ್ನು ಕಂಡ ಶಿಷ್ಯರು ಅವರನ್ನು ಗದರಿಸಿದರು.


ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.


ಆಗ ಜನಸಮೂಹದಲ್ಲಿದ್ದ ಫರಿಸಾಯರಲ್ಲಿ ಕೆಲವರು, “ಬೋಧಕರೇ, ಸುಮ್ಮನಿರುವಂತೆ ನಿಮ್ಮ ಶಿಷ್ಯರನ್ನು ಗದರಿಸಿರಿ,” ಎಂದರು.


ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ಇದನ್ನು ಕೇಳಿ ಯೇಸು, ಅಲ್ಲೇ ನಿಂತು, ಅವನನ್ನು ತಮ್ಮ ಬಳಿಗೆ ಕರೆದುತರುವಂತೆ ಅಪ್ಪಣೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು