Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:43 - ಕನ್ನಡ ಸತ್ಯವೇದವು C.L. Bible (BSI)

43 ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ತಕ್ಷಣವೇ ಅವನಿಗೆ ಕಣ್ಣುಬಂದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಆ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಈ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ತಾಬೊಡ್ತೊಬ್ ತೆಕಾ ದಿಸುಕ್‍ ಲಾಗ್ಲೆ, ಅನಿ ದೆವಾಕ್ ಧನ್ಯವಾದ್ ದಿವ್ನಗೆತ್ ತೊ ಜೆಜುಚ್ಯಾ ಫಾಟ್ನಾ ಗೆಲೊ. ಹೆ ಬಗಟಲ್ಲ್ಯಾ ಸಗ್ಳ್ಯಾ ಲೊಕಾನಿ, ದೆವಾಕ್ ಧನ್ಯವಾದ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:43
30 ತಿಳಿವುಗಳ ಹೋಲಿಕೆ  

ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.


ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.


ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು.


ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ -


ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು