Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:8 - ಕನ್ನಡ ಸತ್ಯವೇದವು C.L. Bible (BSI)

8 ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಿಯಾ ತುಮ್ಕಾ ಸಾಂಗ್ತಾ. ತೊ ಲಗ್ಗುನಾಚ್ ತೆಂಕಾ ನ್ಯಾಯ್ ಕರುನ್ ದಿತಾ. ಖರೆ, ಮಾನ್ಸಾಚೊ ಲೆಕ್ ಹ್ಯಾ ಜಗಾತ್ ಯೆಲ್ಲ್ಯಾ ತನ್ನಾ, ಲೊಕಾಂಚ್ಯಾ ಮನಾತ್ನಿ ವಿಶ್ವಾಸ್ ಹೊತ್ತೆ ತೆಕಾ ಬಗುಕ್ ಗಾವ್ತಾ ಕಾಯ್? ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:8
13 ತಿಳಿವುಗಳ ಹೋಲಿಕೆ  

ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು