Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:14 - ಕನ್ನಡ ಸತ್ಯವೇದವು C.L. Bible (BSI)

14 ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಅತ್ತಾ ತೆಚ್ಯಾ ಲೊಕಾನಿ ತೆಚ್ಯಾ ಫಾಟ್ನಾ ಹ್ಯೊ ರಾಜಾ ಅಮ್ಕಾ ನಕ್ಕೊ ಮನುನ್ ಸಾಂಗುಕ್ ಮನುನ್ ಎಕ್ಲ್ಯಾ ಖಬರ್ ಸಾಂಗ್ತಲ್ಯಾಕ್ ಸಾಂಗುನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:14
15 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


“ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.


ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.


“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು