Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:17 - ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಧನಿಯಾನ್ ತೆಕಾ “ಶಬಾಶ್! ತಿಯಾ ಮಾಜೊ ಎಕ್ ಬರೊ ಆಳ್! ಅಜುನ್ ಸಗೊಳ್ ತಿಯಾ ಮಾಕಾ ವಿಶ್ವಾಸಾನ್ ಹಾಸ್, ತಸೆ ಮನುನ್ ಮಿಯಾ ತುಕಾ ಧಾ ಶಾರಾಂಚ್ಯಾ ವರ್‍ತಿ ಅದಿಕಾರ್ ದಿತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:17
14 ತಿಳಿವುಗಳ ಹೋಲಿಕೆ  

ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.


ಎರಡನೆಯ ಸೇವಕನು ಬಂದು, ‘ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು