Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:21 - ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಮಾಕಾ ತುಜೆ ಭಿಂಯೆ ಕರ್‍ಲೆ, ಕಶ್ಯಾಕ್ ಮಟ್ಲ್ಯಾರ್ ತಿಯಾ ಲೈ ಕಟೊರ್ ಮಾನುಸ್, ತುಜೆ ನ್ಹಯ್ ಮನುನ್ ಹೊತ್ತೆ ಸೈತ್ ತಿಯಾ ಕಾಡುನ್ ಘೆತೆ, ಅನಿ ಪೆರು ನಸಲ್ಲ್ಯಾಕ್ಡೆ ತಿಯಾ ಕಾತರ್‍ತೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:21
16 ತಿಳಿವುಗಳ ಹೋಲಿಕೆ  

ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.


“ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು