Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:22 - ಕನ್ನಡ ಸತ್ಯವೇದವು C.L. Bible (BSI)

22 ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಧನಿಯಾನ್ ತೆಕಾ “ಬುರ್ಶ್ಯಾ ಆಳಾ ತಿಯಾ ಬುರ್ಸೊ ಮನುನ್ ದಾಕ್ವುಕ್ ಮಿಯಾ, ತಿಯಾ ಸಾಂಗಲ್ಲ್ಯಾ ಗೊಸ್ಟಿಯಾಂಚೊ ವಾಪರ್‍ತಾ.ಮಿಯಾ ಕಟೊರ್ ಮಾನುಸ್ ಮನುನ್ ತುಕಾ ಗೊತ್ತ್ ಹಾಯ್, ಮಾಜೆ ನ್ಹಯ್ ಮನುನ್ ಹೊತ್ತೆ ಸೈತ್ ಮಿಯಾ ಘೆತಾ, ಅನಿ ಮಿಯಾ ಪೆರಿನಸಲ್ಲೆ ಪಿಕ್ಕ್ ಮಿಯಾ ಕಾತರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:22
8 ತಿಳಿವುಗಳ ಹೋಲಿಕೆ  

ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.


ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ.


ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು