Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:27 - ಕನ್ನಡ ಸತ್ಯವೇದವು C.L. Bible (BSI)

27 “ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅತ್ತಾ ಮಿಯಾ ರಾಜಾ ನಕ್ಕೊ ಮನುನ್ ಮಟಲ್ಲ್ಯಾ ಮಾಜ್ಯಾ ದುಸ್ಮಾನಾಕ್ನಿ, ಹಿತ್ತೆ ವೊಡುನ್ ಘೆವ್ನ್ ಯೆವಾ, ಅನಿ ಮಾಜ್ಯಾ ಇದ್ರಾಕುಚ್ ತೆಂಕಾ ಜಿವಾನಿ ಮಾರಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:27
23 ತಿಳಿವುಗಳ ಹೋಲಿಕೆ  

ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವೇ ಕೊಂದುಹಾಕುತ್ತೇವೆ,” ಎಂದರು. ಸೌಲನು ಅವರಿಗೆ,


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು